ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಚುನಾವಣಾ ಅಕ್ರಮದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಲವು ಸಂಸದರು, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಅಕ್ರಮ ಮಾರ್ಗದ ಮೂಲಕ ಚುನಾವಣೆಯನ್ನು ಗೆಲ್ಲುತ್ತಿದೆ. ಕರ್ನಾಟಕದಲ್ಲಿಯೂ ಸಹ ಹಲವು ಚುನಾವಣಾ ಅಕ್ರಮಗಳು ನಡೆದಿವೆ. ಚುನಾವಣಾ ಆಯೋಗವೂ ಸಹ ಬಿಜೆಪಿ ಜೊತೆ ಕೈಜೋಡಿಸಿದೆ ಎಂಬುದು ರಾಹುಲ್ ಗಾಂಧಿ ವಾದವಾಗಿದೆ.
ಇದಕ್ಕೆ ಸಾಕಷ್ಟು ಪುರಾವೆಗಳು ತನ್ನ ಬಳಿಯಿವೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಕೊಡುವ ಸಲುವಗಿ ಬಿಜೆಪಿಯೂ ಸಹ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದರು.
ಪ್ರತಿಭಟನೆ, ಬೃಹತ್ ಜಾಥಾ ಹಾಗೂ ಸಮಾವೇಶದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ವಾಹನದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಮುಂಜಾಗೃತೆ ವಹಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ (Freedom park) ಪ್ರತಿಭಟನಾ ರ‍್ಯಾಲಿಯಲ್ಲಿ (Protest) ಭಾಗವಹಿಸಲಿದ್ದು, ಹಾಗಾಗಿ ಬೆಂಗಳೂರಿಗೆ ಆಗಮಿಸುತ್ತಿದಾರೆ. ಈ ಕಾರಣದಿಂದ ಬೆಂಗಳೂರಿನ ಕೆಲ ರಸ್ತೆಗಳಲ್ಲಿ (Road Close) ಸಂಚಾರ ಬಂದ್ ಮಾಡಲಾಗಿದ್ದು, ಆ ಬಗ್ಗೆ ಮಾಹಿತಿ ಇಲ್ಲಿದೆ.




