ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸುದ್ದಿಯಲ್ಲಿರುವಾಗಲೇ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮುಂದಿನ ಮುಖ್ಯಮಂತ್ರಿಯ ಹೆಸರು ಉಲ್ಲೇಖಿಸಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದಿದ್ದಾರೆ.
‘ಸಚಿವ ಎಂ.ಬಿ ಪಾಟೀಲ್ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಉತ್ತರ ಕರ್ನಾಟಕ ಭಾಗದಿಂದ ಅವರು ಮುಖ್ಯಮಂತ್ರಿಯಾಗಲಿ. ಎಂ.ಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗ ಇದೆ’ ಎಂದು ಕೋಡಿಮಠ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.