ಬೆಂಗಳೂರು : ಜಿಲ್ಲೆಯ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವೈಭವ್ ಭೀಮಾಶಂಕರ ಕುಲಕರ್ಣಿ (26) ಮೃತ ವಿದ್ಯಾರ್ಥಿ.
ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ವೈಭವ ಕುಲಕರ್ಣಿ ಬಾಗಲಕೋಟೆಯ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದಿದ್ದು, ಇಂಟರ್‌ಶಿಪ್‌ಗಾಗಿ ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಹೋಗಿದ್ದರು ಎಂದು ತಿಳಿದುಬಂದಿದೆ.
ತಮಿಳುನಾಡಿಗೆ ಪ್ರವಾಸಕ್ಕೆ ತೆರಳಿ ಮರಳಿ ಬರುವಾಗ ಉಸಿರಾಟದ ಸಮಸ್ಯೆ ಎದುರಾಗಿತ್ತು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವೈಭವ್ ಮೃತಪಟ್ಟಿದ್ದಾರೆ. ತಂದೆ-ತಾಯಿ ಹಾಗೂ ಮೂವರು ಸಹೋದರಿಯರು ಇದ್ದಾರೆ.




