ಬೆಳಗಾವಿ :- ಮೂಡಲಗಿ ತಾಲೂಕಿನ ತಿಗಡಿ ಗ್ರಾಮಕ್ಕೆ ಸಮರ್ಪಕ ಬಸ್ ಸಂಚಾರ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ತಿಗಡಿ ಗ್ರಾಮಕ್ಕೆ ಗೋಕಾಕ ಬಸ್ ನಿಲ್ದಾಣದಿಂದ ಈಗಾಗಲೇ 43 ಸರತಿಗಳು ಕಾರ್ಯಾಚರಣೆಯಾಗುತ್ತಿದ್ದು, ಸದರಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮನವಿ ಸಲ್ಲಿಸಿದ ನಂತರದಲ್ಲಿ ಓರ್ವ ಸಂಚಾರ ಸಿಬ್ಬಂದಿಯನ್ನು ಮಾರ್ಗ ತನಿಖಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆ ಅನುಗುಣವಾಗಿ 43 ಸರತಿಗಳೊಂದಿಗೆ ಹೆಚ್ಚುವರಿಯಾಗಿ 2 ಸರತಿಗಳನ್ನು ತಿಗಡಿ ಗ್ರಾಮಕ್ಕೆ ಕಾರ್ಯಾಚರಣೆಗೊಳಿಸಲಾಗಿರುತ್ತದೆ ಎಂದು ಚಿಕ್ಕೋಡಿ ವಾಕರಸಾಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.