ಬೆಂಗಳೂರು : ನಿನ್ನೆ 15 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




