Join The Telegram | Join The WhatsApp |
ಬೆಂಗಳೂರು : ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 16ರಂದು ಮಹಿಳಾ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ.
‘ನಾ ನಾಯಕಿ’ ಎಂಬ ಘೋಷಣೆಯಡಿಯಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ಮಹಿಳಾ ಕಾರ್ಯಕರ್ತರಿಗೆ ಮಾತ್ರ ಅವಕಾಶವಿದೆ.
ಪುರುಷ ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಹೀಗಾಗಿ ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ತಿಳಿಸಿರುವ ಡಿ.ಕೆ. ಶಿವಕುಮಾರ್, ತಾವೂ ಸೇರಿದಂತೆ ಯಾವೊಬ್ಬ ಪುರುಷ ನಾಯಕರು ವೇದಿಕೆ ಮೇಲೆ ಉಪಸ್ಥಿತರಿರುವುದಿಲ್ಲ. ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
Join The Telegram | Join The WhatsApp |