ವಿಜಯಪುರ: ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬಾರದು ಎಂದು ಕರೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ, ಪುರುಷರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದಾರೆ. ಗಂಡಸರು ಏನು ಪಾಪ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮೀ ಯೋಜನೆ. ಇದರಿಂದ ಗಂಡಸರಿಗೆ ಮಾತ್ರವಲ್ಲ ಮನೆಯ ಹೆಣ್ಣುಮಕ್ಕಳಿಗೂ ಅನ್ಯಾಯವಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬಾರದು ಎಂದು ಹೇಳಿದರು.