Ad imageAd image

ಇಂದಿನಿಂದ ಏ. 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Bharath Vaibhav
ಇಂದಿನಿಂದ ಏ. 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
rain
WhatsApp Group Join Now
Telegram Group Join Now

ಬೆಂಗಳೂರು : ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.

ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆಯಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 35.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!