ನೇಪಿಯರ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆಲರೌಂಡರ್ ಮೈಕಲ್ ಬಾರ್ಸೆವೆಲ್ ಪ್ರವಾಸಿ ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ತಂಡದ ನಾಯಕತ್ವ ವಹಿಸುವರು.
ಈಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ನಿರ್ವಹಣೆ ತೋರಿರುವ ಕಿವೀಸ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದಿತ್ತು. ಮುಂಬರುವ ಐಪಿಎಲ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಹಾಗೂ ಗಾಯಗೊಂಡಿರುವ ಪ್ರಮುಖ ಆಟಗಾರರ ಗೈರು ಹಾಜರಿಯಲ್ಲಿ ಬಾರ್ಸೆವೆಲ್ ತಂಡದ ನಾಯಕತ್ವ ವಹಿಸಲಿದ್ದಾರೆ. 34 ವರ್ಷದ ೀ ಆಲರೌಂಡರ್ ಸದ್ಯ ಕಿವೀಸ್ ತಂಡದಲ್ಲಿನ ಅನುಭವಿ ಆಟಗಾರರಲ್ಲಿ ಒಬ್ಬರಾಗಿದ್ದಾರೆ.




