Ad imageAd image

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ : ನಿನ್ನೆ ಒಂದೇ ದಿನ 6 ಜನ ಬಲಿ

Bharath Vaibhav
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ : ನಿನ್ನೆ ಒಂದೇ ದಿನ 6 ಜನ ಬಲಿ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಒಂದೇ ದಿನ 6 ಜನ ಬಲಿಯಾಗಿದ್ದು, ಬೆಳಗಾವಿ, ಹಾವೇರಿ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಸೇರಿದಂತೆ ಒಟ್ಟು 6 ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಮಾಲತೇಶ್ (42) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳದಿಂದ ನೊಂದು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನು ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬುವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿ ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಎನ್. ಆರ್ ನರಸಿಂಹಯ್ಯ (58) ಎಂಬುವರು ನೇಣಿಗೆ ಶರಣಾಗಿದ್ದಾರೆ.

ಆಟೋ ಚಾಲಕರಾಗಿದ್ದ ಇವರು ಧರ್ಮಸ್ಥಳ ಸಂಘ, ಆಶೀರ್ವಾದ, ಗ್ರಾಮೀಣ ಕೂಡ, ಎಲ್ ಅಂಡ್ ಟಿ, ಸ್ಪಂದನ, ಸಮಸ್ತ, ನವ ಚೇತನ್ಯ ಫೈನಾನ್ಸ್ ಕಂಪನಿಗಳಲ್ಲಿ ಒಟ್ಟು 3.5 ಲಕ್ಷ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ.

ಸಾಲ ಕಟ್ಟಲು ಹಣವಿಲ್ಲದ ಕಾರಣ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ವಿವಿಧ ಮೈಕ್ರೋ ಫೈನಾನ್ಸ್ ಗಳಿಂದ 4 ಲಕ್ಷ ರೂ. ಸಾಲ ಮಾಡಿದ್ದರು.

ಇನ್ನು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ವಿಷಸೇವಿಸಿ ಶಿವನಪ್ಪ ಧರ್ಮಟ್ಟಿ(66) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕ್ಯಾನ್ಸರ್ ಪೀಡಿತ ಪತ್ನಿ ಚಿಕಿತ್ಸೆಗಾಗಿ ವಿವಿಧ ಫೈನಾನ್ಸ್​ ಕಂಪನಿಗಳಿಂದ 10 ಲಕ್ಷ ರೂಪಾಯಿ ಸಾಲ ಮಾಡಿದ್ದ. ಆದ್ರೆ, ಆ ಸಾಲವನ್ನು ಮರು ಪಾವತಿಸುವಂತೆ ಮೈಕ್ರೋ ಫೈನಾನ್ಸ್​ ಸಿಬ್ಬಂದಿ ಕಿರುಕುಳ ನೀಡಲಾರಂಭಿಸಿವೆ. ಇದರಿಂದ ಬೇಸತ್ತು ಶಿವನಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!