ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ನಾಳೆಯೇ ಸುಗ್ರೀವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಸುಗ್ರೀವಾಜ್ಞೆ ಜಾರಿ ಮಾಡಲಿದ್ದೇವೆ ಎಂದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ನಿಂದ ಕಿರುಕುಳ ಆದರೆ ತಕ್ಷಣ ಪೊಲೀಸರಿಗೆ ದೂರು ನೀಡಬೇಕು ಆಗ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಪೊಲೀಸರಿಗೆ ಸುಮೋಟೋ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ ಎಂದರು.