ಸೇಡಂ: ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ ಉಂಟಾಗಿದ್ದು, ಮಳಖೇಡದ ಪ್ರವಾಹ ಪೀಡಿತ ಸ್ಥಳಗಳಿಗೆ ಸ್ಥಳೀಯ ಶಾಸಕರು ಹಾಗೂ ಸಚಿವರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳಖೇಡ ಕಾಗಿಣಾ ನದಿ ತೀರದ ಸಮಖೇಡ ತಾಂಡಾದ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಮಳಖೇಡದ ಕೋಲಿವಾಡ, ದರ್ಗಾ ಕಾಲೋನಿ ಹಾಗೂ ಮಳಖೇಡ ಕಾಲೋನಿ ರಸ್ತೆ, ಹಳ್ಳ ಹಾಗೂ ಕಾಗಿಣಾ ನದಿ ತೀರದ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿದರು ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ತಾಲೂಕಾಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಈಗಾಗಲೇ ಗಂಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪಂಚಾಯತ್ ಅಧಿಕಾರಿಗಳು ಪ್ರವಾಹ ಪೀಡಿತರನ್ನು ಗುರುತಿಸಿ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಗಿಣಾ ನದಿ ಪಾತ್ರದ ಸ್ಥಳದಲ್ಲಿ ಜನ ಜಾನುವಾರುಗಳು ಇಳಿಯದಂತೆ ಪೊಲೀಸರು ಹಾಗೂ ಅಧಿಕಾರಿಗಳು ಎಚ್ಚರಿಕೆ ನೀಡಿ, ಡಂಗುರ ಹೊಡಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಎಸಿ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೇಯಾಂಕ ಧನುಶ್ರೀ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




