ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ದೇಶ, ರಾಜ್ಯದಲ್ಲಿ ಅನಿಲ ಪೂರೈಕೆಯಲ್ಲಿ ತೊಂದರೆ ಉಂಟಾಗಿರುವ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಯಾರಾದರೂ ಗ್ಯಾಸ್ ಸಿಲೆಂಡರ್ಗಳನ್ನು ಸಂಗ್ರಹಿಸಿಡುವುದು ಹಾಗೂ ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.
ಕಠಿಣ ಸ್ಥಿತಿಯನ್ನು ಬಳಸಿಕೊಂಡು ಗ್ಯಾಸ್ ಸಿಲೆಂಡರ್ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ವಹಿಸಲು ರಾಜ್ಯಾದ್ಯಂತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಮನೆಗಳಿಗೆ ಅಡುಗೆ ಸಿಲಿಂಡರ್ಗಳ ಪೂರೈಕೆಗೆ ಸಂಬAಧಿಸಿದAತೆ ಪ್ರಸ್ತುತ ಯಾವುದೇ ಸಮಸ್ಯೆಗಳಿಲ್ಲ ಎಂದು ತಿಳಿಸಿದ ಸಚಿವರು ಹೊಟೇಲ್ಗಳು ಕೆಲವು ದಿನಗಳ ವರೆಗೆ ಸಮಸ್ಯೆ ಎದುರಿಸಬಹುದು. ಈ ಸಮಸ್ಯೆಗಳನ್ನು ಕೂಡ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ ಎಂದು ಸಚಿವರು ತಿಳಿಸಿದರು.
ಕಾಳ ಸಂತೆಯಲ್ಲಿ ಎಲ್ಪಿಜಿ ಸಿಲೆಂಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಜಿ. ಪರಮೇಶ್ವರ




