ಬೆಂಗಳೂರು: ಹೊಸ ವರ್ಷಕ್ಕೆ ಮುನ್ನವೇ ಗೃಹಲಕ್ಷ್ಮಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.
ನಾಳೆ ಸೋಮವಾರದಿಂದಲೇ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು. ನಾನು ಯಾವಾಗಲೂ ತಿಂಗಳ ಹೆಸರು ಹೇಳುವುದಿಲ್ಲ.
ಕಂತು ಎಂದು ಹೇಳುತ್ತೇನೆ. ಈಗಾಗಲೇ ಆರ್ಥಿಕ ಇಲಾಖೆಯವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಡಿಸೆಂಬರ್ 22 ರಿಂದ 24ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ 1.26 ಕೋಟಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಸೋಮವಾರದಿಂದ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.




