ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 737 ಸರ್ವೇಯರ್’ ನೇಮಕಾತಿಗೆ ಆಧಿಸೂಚನೆ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೋಡಿ ಮತ್ತು ದುರುಸ್ತ್ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇದಕ್ಕೇ ಹೆಚ್ಚುವರಿ ಸರ್ವೇಯರುಗಳ ಅಗತ್ಯವಿದೆ. 737 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿರು.
ಇನ್ನೂ ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು.
ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದರು.