Ad imageAd image

ರಾಜ್ಯದಲ್ಲಿ ಮಳೆಯಿಂದ 44,000 ಹೆಕ್ಟರ್ ಬೆಳೆ ಹಾನಿಯಾಗಿದೆ : ಸಚಿವ ಕೃಷ್ಣ ಬೈರೇಗೌಡ 

Bharath Vaibhav
ರಾಜ್ಯದಲ್ಲಿ ಮಳೆಯಿಂದ 44,000 ಹೆಕ್ಟರ್ ಬೆಳೆ ಹಾನಿಯಾಗಿದೆ : ಸಚಿವ ಕೃಷ್ಣ ಬೈರೇಗೌಡ 
krishna byre gowda
WhatsApp Group Join Now
Telegram Group Join Now

ಬೆಳಗಾವಿ: ರಾಜ್ಯದಲ್ಲಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಕ್ಷಣವೇ ಸರ್ವೇ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ರಾಜ್ಯದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಶೇಕಡ 28ರಷ್ಟು ಮಳೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಜೊತೆಗೆ ಅನೇಕ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನದಿ ದಡದ ಗ್ರಾಮಗಳ ಸಾವಿರಾರು ಜನ ಕಾಳಜಿ ಕೇಂದ್ರಗಳಲ್ಲಿದ್ದಾರೆ.

ರಾಜ್ಯದಲ್ಲಿ 64 ಕಾಳಜಿ ಕೇಂದ್ರ ಆರಂಭಿಸಿದ್ದು, 10,000ಕ್ಕೂ ಅಧಿಕ ಸಂತ್ರಸ್ತರು ಆಶ್ರಯ ಪಡೆದುಕೊಂಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 800ಕ್ಕೂ ಅಧಿಕ ಮನೆಗಳು ಸಂಪೂರ್ಣ ಹಾನಿಯಾಗಿದ್ದು, 4000 ಮನೆಗಳು ಭಾಗಶಃ ಹಾನಿಯಾಗಿವೆ. ಇದುವರೆಗೆ 43 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!