Ad imageAd image

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿದರು.‌

ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.

ನಾಳೆ ಸಂಘಟನೆಗಳೊಂದಿಗೆ ಸಭೆ
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ, ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ, ಸೋಮಶೇಖರ್ ಯಾದಗಿರಿ, ಉಮಾದೇವಿ ಸೇರಿದಂತೆ ನೂರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!