Ad imageAd image

ಕೆರೆ ತುಂಬಿಸುವ ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ಕೆರೆ ತುಂಬಿಸುವ ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ ಹಾಗೂ ಉಚಗಾಂವ ಭಾಗದ ಒಟ್ಟು 20 ಕೆರೆಗಳನ್ನು ತುಂಬಿಸುವ ಯೋಜನೆಗೆ ಸರ್ಕಾರದಿಂದ 2.39 ಕೋಟಿ ರೂ. ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಉಚಗಾಂವ ಭಾಗದ ಬಸುರ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ನೀರು ಸಂಗ್ರಹಣಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ‌ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಹಾಗೂ ಉಚಗಾಂವ ಸುತ್ತಮುತ್ತಲಿನ ಗ್ರಾಮಗಳ ರೈತರ ಅನೂಕೂಲಕ್ಕಾಗಿ ಈ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಿಂದ ರೈತರ ಹೊಲಗದ್ದೆಗಳಿಗೆ ನೀರು ಸಿಗಲಿದೆ. ರೈತರ ಹಾಗೂ ಗ್ರಾಮೀಣ ಭಾಗದ ಆರ್ಥಿಕತೆ ದೃಷ್ಟಿಯಿಂದ ಈ ಯೋಜನೆ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ನರೇಂದ್ರ ರೆಡ್ಡಿ, ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!