ಬೆಳಗಾವಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಘಟನೆ ನಡೆದಿದ್ದು ಅತ್ಯಂತ ದುರ್ದೈವದ ಸಂಗತಿ. ಎಲ್ಲೂ ಇಂತಹ ಘಟನೆ ನಡೆಯಬಾರದು. ಈಗಾಗಲೆ ಆರೋಪಿಯ ಬಂಧನವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ಅಪರಾಧಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ನೇಹಾ ಕುಟುಂಬದ ದುಃಖದಲ್ಲಿ ನಾನೂ ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ವರದಿ ಪ್ರತೀಕ ಚಿಟಗಿ