Ad imageAd image

ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Bharath Vaibhav
ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
WhatsApp Group Join Now
Telegram Group Join Now

ಬೆಂಗಳೂರು :ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು.

ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ.

ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಸೇರಿದಂತೆ, ಬಂದು ಮಿತ್ರರು ಹಾಗೂ ಅಪಾರ ಸಾಹಿತ್ಯಾಭಿಮಾನಿಗಳಿಗೆ ಕಮಲ ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!