Ad imageAd image

ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಹಬ್ಬದ ವಾತಾವರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Bharath Vaibhav
ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಹಬ್ಬದ ವಾತಾವರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ : 100 ವರ್ಷದ ಇತಿಹಾಸವನ್ನ ಮರುಕಳಿಸುವ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಇಡೀ ಬೆಳಗಾವಿ ನಗರ ಸಜ್ಜಾಗಿದೆ. ವಿಶ್ವಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಹಬ್ಬದ ಮಾದರಿಯಲ್ಲಿ ಬೆಳಗಾವಿ ನಗರವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಹಬ್ಬದ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದರು.

1924ರಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಅಧಿವೇಶನ ನಡೆದಿತ್ತು. ಆ ವೇಳೆ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯದ ಕಿಚ್ಚನ್ನು ಈ ಭಾಗದಲ್ಲಿ ಹಚ್ಚಿದ್ದರು. ಆ ಒಂದು ಸವಿನೆನಪಿಗಾಗಿ ಗಾಂಧಿ ಭಾರತ ಹೆಸರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

 

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಡೀ ಬೆಳಗಾವಿ ನಗರವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿದೆ. ವಿದ್ಯುತ್ ದೀಪಾಲಂಕಾರವನ್ನು ನೋಡುವ ಸಲುವಾಗಿ ಬೆಳಗಾವಿಯ ಗ್ರಾಮೀಣ ಪ್ರದೇಶದ ಜನರು ಬರುತ್ತಿದ್ದಾರೆ. ಜಿಲ್ಲೆಯ ಪಾಲಿಗೆ ಇದು ಹಬ್ಬವಾಗಲಿದೆ ಎಂದು ಹೇಳಿದರು

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!