Ad imageAd image

ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲ

Bharath Vaibhav
ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲ
WhatsApp Group Join Now
Telegram Group Join Now

ರೋಣ: ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಚಾಲನೆ ನೀಡಿದರು.


ಹಾಲಕೆರೆ ಮಠದ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಪೂಜ್ಯಶ್ರೀ ಮ.ನಿ.ಪ್ರ ಸಿದ್ದಲಿಂಗ ಮಹಾಸ್ವಾಮಿಗಳು, ಸಂತೆಕಲ್ಲೂರಿನ ಘನಮಠೇಶ್ವರಮಠದ ಪೂಜ್ಯಶ್ರೀ ಮ.ನಿ.ಪ್ರ ಗುರುಬಸವ ಮಹಾಸ್ವಾಮಿಗಳು, ನೀಲಗುಂದದ ಪೂಜ್ಯಶ್ರೀ ಮ.ನಿ.ಪ್ರ ಪ್ರಭುಲಿಂಗ ಮಹಾಸ್ವಾಮಿಗಳು, ಕರೇಗುಡ್ಡ ಮಹಾಂತೇಶ್ವರ ಮಠದ ಪೂಜ್ಯಶ್ರೀ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು, ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಪೂಜ್ಯಶ್ರೀ ಮ.ನಿ.ಪ್ರ ಬಸವಲಿಂಗ ಮಹಾಸ್ವಾಮಿಗಳು, ಖೇಳಗಿ ಶ್ರೀ ಶಿವಲಿಂಗೇಶ್ವರಮಠದ ಪೂಜ್ಯಶ್ರೀ ಮ.ನಿ.ಪ್ರ ಶಿವಲಿಂಗ ಮಹಾಸ್ವಾಮಿಗಳು, ಸೋಮಸಮುದ್ರದ ಪೂಜ್ಯಶ್ರೀ ಸಿದ್ದಲಿಂಗ ದೇಶಿಕರು, ಶ್ರೀಧರಗಡ್ಡೆಯ ಪೂಜ್ಯಶ್ರೀ ಮರಿಕೊಟ್ಟೂರು ದೇಶಿಕರು, ರೋಣ ಅಕ್ಕನಬಳಗದ ಅಧ್ಯಕ್ಷರಾದ ಶ್ರೀಮತಿ ಅನ್ನಪೂರ್ಣ ಜಿ. ಪಾಟೀಲ, ಹಾಲಕೆರೆ ಕೆ.ವಿ.ಜಿ ಬ್ಯಾಂಕಿನ ಮ್ಯಾನೆಜರ್ ಶ್ರೀಮತಿ ಕದಿರಿ ಶ್ರೀರಿತಾ, ವೀಣಾ ಪಾಟೀಲ್, ಅನ್ನಪೂರ್ಣ ಪಾಟೀಲ, ಕಮಲಾ ಹುನಗುಂದ, ಹಾಲಕೆರೆ ಮಠದ ಭಕ್ತರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಕ್ಕಮಹಾದೇವಿ ಮಾತೃ ಬಳಗಕ್ಕೆ ಸಹ ಚಾಲನೆ ನೀಡಿದರು.

 

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!