ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದ್ದಾರೆ.
ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಸಾಥ್ ನೀಡಿದರು.




