Ad imageAd image

ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮತಗಟ್ಟೆಗಳ ವೀಕ್ಷಣೆ,ಕಾರ್ಯಕರ್ತರೊಂದಿಗೆ ಮಾಹಿತಿ ಸಂಗ್ರಹಿಸುತ್ತಿರುವ ಸಚಿವರು

Bharath Vaibhav
ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮತಗಟ್ಟೆಗಳ ವೀಕ್ಷಣೆ,ಕಾರ್ಯಕರ್ತರೊಂದಿಗೆ ಮಾಹಿತಿ ಸಂಗ್ರಹಿಸುತ್ತಿರುವ ಸಚಿವರು
WhatsApp Group Join Now
Telegram Group Join Now

ಬೆಳಗಾವಿ:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ತಮ್ಮ ಮತದಾನದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಬೆಳಗಾವಿಯ ವಿಜಯನಗರದ ಸರ್ಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಮತ ಚಲಾಯಿಸಿದ ಸಚಿವರು, ನೇರವಾಗಿ ಖಣಗಾಂವ ಮತಗಟ್ಟೆಗೆ ಭೇಟಿ ನೀಡಿದರು. ಅಲ್ಲಿಂದ ಸುಳೇಭಾವಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಬೈಲಹೊಂಗಲ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ ಮಹಾಂತೇಶ್ ಮತ್ತಿಕೊಪ್ಪ ಅವರ ನಿವಾಸದಲ್ಲಿ ಉಪಹಾರ ಸೇವಿಸಿ, ಪಟ್ಟಣದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ‌ಮಾಹಿತಿ ಪಡೆದರು. ಈ ವೇಳೆ‌ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ ಸಚಿವರು, ಸುಗಮವಾಗಿ ಮತದಾನ ಸಾಗಲಿ,ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ಕ್ಷೇತ್ರದ ಎಲ್ಲೆಡೆ ಸಂಚರಿಸುತ್ತಿರುವ ಸಚಿವರು, ಕಾರ್ಯಕರ್ತರಿಂದ ಮತದಾನ ಪ್ರಕ್ರಿಯೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

  • ವರದಿ ಪ್ರತೀಕ ಚಿಟಗಿ
WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!