ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು.
ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ.
ರೈತರ ಪರವಾಗಿ ಬಿಜೆಪಿ ಯವರು ಏನು ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ. ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು.
ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ಹೇಳಿದರು.ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದರು.




