Ad imageAd image

ಗ್ರಾಮಸ್ಥರ ಬೇಡಿಕೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತ್ವರಿತ ಸ್ಪಂದನೆ

Bharath Vaibhav
ಗ್ರಾಮಸ್ಥರ ಬೇಡಿಕೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತ್ವರಿತ ಸ್ಪಂದನೆ
WhatsApp Group Join Now
Telegram Group Join Now

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಿಂದ ವಿರಪನಕೊಪ್ಪ ಗ್ರಾಮದವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸುಮಾರು 1.79 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಕಾಮಗಾರಿ ನಡೆಯಲಿದೆ. ಗ್ರಾಮಸ್ಥರ ಪ್ರತಿಯೊಂದು ಬೇಡಿಕೆಗಳಿಗೂ ಈ ಭಾಗದ ಶಾಸಕರಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತ್ವರಿತವಾಗಿ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸುತ್ತಿದ್ದಾರೆ. ಮೂಲಭೂತ ಸೌಲಭ್ಯಗಳ ಜೊತೆಗೆ ಹಲವಾರು ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಯುವಕರಿಗೆ ಉದ್ಯೋಗ ಕಲ್ಪಿಸುವ ಮತ್ತು ಶಿಕ್ಷಣ ಹಾಗೂ ಆರೋಗ್ಯಕ್ಕೆ ಪೂರಕವಾಗಿರುವ ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಸ್ಥಳೀಯರ ಸಲಹೆ ಪಡೆದು, ನಿಗದಿತ ಸಮಯದಲ್ಲಿ ರಸ್ತೆ ಪೂರ್ಣಗೊಳಿಸುವಂತೆ ಗುತ್ತಿಗೆದಾರಿಗೆ ಸೂಚಿಸಲಾಗಿದೆ. ಗ್ರಾಮಸ್ಥರ ಸಹಕಾರ ನಿರಂತರವಾಗಿರಲಿ ಎಂದು ಅವರು ವಿನಂತಿಸಿದರು.

ಈ ವೇಳೆ ವೀರನಗೌಡ ಪಾಟೀಲ, ರಮೇಶ ಮರಕಟ್ಟಿ, ಮಂಜು ಹುಬ್ಬಳ್ಳಿ, ಫಕೀರ್ ಕುರಬರ, ಸಿ. ಸಿ. ಪಾಟೀಲ, ಪ್ರಕಾಶ ಜಪ್ತಿ, ಈರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಜ್ಞಾನದೇವ, ನಾಗೇಶ್ ಮೇಟಿನ ಉಪಸ್ಥಿತರಿದ್ದರು.

ವರದಿ: ಪ್ರತೀಕ್ ಚಿಟಗಿ
WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!