Ad imageAd image

ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Bharath Vaibhav
ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
laxmi hebbalkar
WhatsApp Group Join Now
Telegram Group Join Now

ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಹೇಳಿದರು. ಕರ್ನಾಟಕದಲ್ಲಿರುವ ಕುಟುಂಬಗಳ ಪೈಕಿ ಶೇ.98 ರಷ್ಟು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಬಾಕಿ ಇರುವ 11 ನೇ ಕಂತಿನ ಹಣ ಜುಲೈ 15 ರೊಳಗೆ ಪಾವತಿಯಾಗಲಿದೆ. ಅಷ್ಟೇ ಅಲ್ಲದೇ ಪ್ರತಿ ತಿಂಗಳ 15 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಬಗ್ಗೆ ಯಾರೂ ಚಿಂತೆ ಪಡುವ ಅಗತ್ಯವಿಲ್ಲ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಓPಅI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ ಇ -ಏಙಅ , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!