ಚಿಕ್ಕಮಗಳೂರು : ಶನಿವಾರ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಚಿಕ್ಕಮಗಳೂರು ನಗರಕ್ಕೆ ಶುಕ್ರವಾರ ಸಂಜೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಭರ್ಜರಿ ಸ್ವಾಗತ ನೀಡಲಾಯಿತು.
ನಗರ ಪ್ರವೇಶಿಸುತ್ತಿದ್ದಂತೆ ಶಾಸಕರಾದ ಎಚ್.ಡಿ. ತಮ್ಮಯ್ಯ ಹಾಗೂ ನಯನಾ ಮೋಟಮ್ಮ ಮತ್ತು ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು, ಅಧಿಕಾರಿಗಳು ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಇದಕ್ಕೂ ಮೊದಲು, ಜಿಲ್ಲಾ ಗಡಿ ಗ್ರಾಮ ಮಾಗಡಿಯಲ್ಲಿ ಸಹ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯನವರು ಸಚಿವರನ್ನು ಸ್ವಾಗತಿಸಿದರು.
ಈ ವೇಳೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ತಹಶಿಲ್ದಾರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಪ್ರತೀಕ ಚಿಟಗಿ