ಬೆಳಗಾವಿ : ಸಚಿವ ಲಕ್ಷ್ಮೀ ಹೆಬ್ಬಾಳ್ಳ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಳ ಕಾರು ಚಾಲಕ ಶಿವ ಪ್ರಸಾದ್ ಹಿಟ್ & ರನ್ ಕೇಸ್ ದಾಖಲಿಸಿದ್ದಾರೆ. ಸಚಿವ ಲಕ್ಷ್ಮಿ ಹೆಬ್ಬಾಳ ಕಾರು ಅಪಘಾತಕ್ಕೆ ಪುಕರಣಕ್ಕೆ
ಸಂಬಂಧಿಸಿದಂತೆ ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.’ನಾನು ಸಚಿವರ ಸರ್ಕಾರಿ ಕಾರು
ಚಲಾಯಿಸುತ್ತಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಕಂಟೇನರ್ ಟ್ರಿಕ್ ಹೋಗುತ್ತಿತ್ತು. ಅದರ ಚಾಲಕ ಯಾವುದೇ ಮುನ್ಸೂಚನೆ ಕೊಡದ
> ಎಡಬದಿಗೆ ಬಂದನು. ಕಾರನ್ನು ಎಡಬದಿಗೆ ತೆಗೆದುಕೊಂಡರೂ ಅದರ
ಬಲಬದಿಗೆ ಟ್ರಕ್ ತಾಗಿದೆ. ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ
ಮರಕ್ಕೆ ಢಿಕ್ಕಿ ಹೊಡೆದಿದೆ’ ಎಂದು ದೂರಿನಲ್ಲಿ ಕಾರು ಚಾಲಕ ಶಿವಪ್ರಸಾದ್ ಆರೋಪಿಸಿದ್ದಾರೆ.