Ad imageAd image

ಗ್ರಾಮ ಪಂಚಾಯಿತಿಗಳಿಗೆ ಮರಳು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿ : ಸಚಿವ ಮಲ್ಲಿಕಾರ್ಜುನ

Bharath Vaibhav
ಗ್ರಾಮ ಪಂಚಾಯಿತಿಗಳಿಗೆ ಮರಳು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿ : ಸಚಿವ ಮಲ್ಲಿಕಾರ್ಜುನ
WhatsApp Group Join Now
Telegram Group Join Now

ಬೆಂಗಳೂರು: ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ.

ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ.ನಿಗದಿಪಡಿಸಲಾಗಿದೆ. ಪ್ರಸ್ತುತ ಸದರಿ ವ್ಯವಸ್ಥೆ ಜಾರಿಗೆಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

4, 5 ಮತ್ತು ಉನ್ನತ ಶ್ರೇಣಿಗಳ ಹಳ್ಳ, ನದಿ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿ ಸಾರ್ವಜನಿಕ, ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್ ವಿಲೇವಾರಿ ಮಾಡುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ.

ನೂತನ ನೀತಿಯಂತೆ ಮರಳು ಬ್ಲಾಕ್ ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಿದ ಮರಳು ಬ್ಲಾಕ್ ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!