Ad imageAd image

ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ

Bharath Vaibhav
ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ
WhatsApp Group Join Now
Telegram Group Join Now

ಬೆಂಗಳೂರು: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ RamalingaReddyForCM ಎಂದು ಕೆಲವರು ಸುದ್ದಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ್ತಿದೆ.

ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಷ್ಟೇ ನಮ್ಮ ಗುರಿಯಾಗಿರಬೇಕು ಎಂದು ತಿಳಿಸಿದ್ದಾರೆ.

ಪಕ್ಷ ಮತ್ತು ನಾಡಿನ ಜನತೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದರತ್ತ ಮಾತ್ರ ನನ್ನ ಗಮನವಿದೆ. ಆದ್ದರಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಯಾರೂ ಇಂತಹ ಗೊಂದಲಕಾರಿ ಪ್ರಚಾರಕ್ಕೆ ಕಿವಿಗೊಡಬಾರದು ಮತ್ತು ಇದರಲ್ಲಿ ಭಾಗಿಯಾಗಬಾರದು. ನಾವೆಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಕೋರಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!