ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಕಚೇರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಪಕ್ಷ ಸಂಘಟನೆ ಮತ್ತು ದಿ.ಹೆಚ್ ವೈ. ಮೇಟಿ ಅವರ ನಿಧನದಿಂದ ತೆರುವಾದ ಕ್ಷೇತ್ರಕ್ಕೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು.
ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಜಿಲ್ಲೆಯಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು.
ದಿ.ಹೆಚ್ ವೈ. ಮೇಟಿ ಅವರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಹೀಗಾಗಿ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಿಯಾಗಲು ಎಲ್ಲರೂ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ಎಲ್ಲರೂ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಗ್ಯಾರಂಟಿ ಕಾರ್ಡ್ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯೊಡತಿಗೆ . 2 ಸಾವಿರ ಪೋ›ತ್ಸಾಹ ಧನ ನೀಡಲು ಗೃಹಲಕ್ಷ್ಮಿ ಯೋಜನೆ ಜಾರಿ, ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. ಪಕ್ಷದ ಕೊಡುಗೆ ಜನರಿಗೆ ತಿಳಿಸಬೇಕು. ಹೀಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ಎಂದು ಸಚಿವರು ಸೂಚಿಸಿದರು
ಜಿಲ್ಲಾ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ, ಬೀಳಗಿ ಶಾಸಕ ಜೆ ಟಿ ಪಾಟೀಲ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಜಯ್ ಕುಮಾರ್ ಸರನಾಯಕ್ ಇದ್ದರು.




