ಗೋಕಾಕ: ನಿವಾಸದಲ್ಲಿ ಚಿಕ್ಕೋಡಿ ಜಿಲ್ಲಾ ಸಂಸದರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಜನತಾದರ್ಶನ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಇಂದು ಜನತಾ ದರ್ಶನವನ್ನು ನಡೆಸಿ, ಜನರ ಅಹವಾಲುಗಳನ್ನು ಆಲಿಸಿದರು. ಕೆಲವು ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಒದಗಿಸಲಾಗಿದ್ದು, ಇತರ ಸಮಸ್ಯೆಗಳ ನಿವಾರಣೆಗೆ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಶಾಸಕರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ