ಸೇಡಂ : ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ 3.11 ಕೋಟಿ ರೂಪಾಯಿ ಅನುದಾನದಲ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ನಿರ್ಮಿಸಲಾಗಿರುವ 08 ಕೋಣೆಗಳು, ಕಾಂಪೌಂಡ್, ಶೌಚಾಲಯ ಕಟ್ಟಡವನ್ನು ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟಿಸಿದರು.
ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿದೆ.
ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಶಾಲೆಗಳನ್ನಾಗಿಸಲು ಎಲ್ಲಾ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಎಐಸಿಸಿ ಅಧ್ಯಕ್ಷರು ಮತ್ತು ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಪರಿಶ್ರಮದ ಫಲವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಈ ಭಾಗದ ಅನೇಕ ಬಡ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದೊರಕುವಂತಾಗಿದೆ ಎಂದು ಸಚಿವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಕಾರ್ಯಕ್ರಮದಲ್ಲಿ ಮಲ್ಕಾಪಲ್ಲಿ ಗ್ರಾಮದ ಮುಖಂಡರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




