ನವದೆಹಲಿ: ಜಾರಿ ನಿರ್ದೇಶನಾಲಯದ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಧಾನಮಂತ್ರಿ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಮಿಶ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಕಟವರ್ತಿಯಾಗಿದ್ದು, ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ವೇಳೆ ಅವರಿಗೆ ಹಲವು ಬಾರಿ ಸೇವಾ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ಹುದ್ದೆ ಕಾರ್ಯದರ್ಶಿ ದರ್ಜೆಯದ್ದಾಗಿದ್ದು, ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಅಥವಾ EAC-PM ಇದೊಂದು ಸ್ವತಂತ್ರ
ಸಂಸ್ಥೆಯಾಗಿದೆ. ಈ ಮಂಡಳಿ ಕಠಿನ ಆರ್ಥಿಕ ಸ್ಥಿತಿಗತಿ, ಹಣದುಬ್ಬರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿ ಪ್ರಮುಖ ಸಲಹ ನೀಡುವುದು ಈ ಮಂಡಳಿಯ ಹೊಣೆಯಾಗಿದೆ.
2024ರ ನವೆಂಬರ್ 1ರಂದು ಆರ್ಥಿಕ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷ ಬಿಬೆಕ್ ಡೆಬ್ರಿಯೋ (68ವರ್ಷ) ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಮಿಶ್ರಾ ಅವರನ್ನು ಮಂಡಳಿಗೆ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.