
ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಮುಂದಿನ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆ ಇದೆ. ಸೆಪ್ಟೆಂಬರ್ 28 ರಂದು ಬಿಸಿಸಿಐ ವಾರ್ಷಿಕ ಸಾಮಾನ್ಯ ಜರುಗಲಿದ್ದು, ಮೊದಲೆರಡು ದಿನಗಳ ಕಾಲ ಬಿಸಿಸಿಐ ಅಧ್ಯಕ್ಷರ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಸುವ ಕಾರ್ಯ ನಡೆಯಲಿದೆ. ನಂತರ ಅಧ್ಯಕ್ಷರಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಏತನ್ಮಧ್ಯೆ ಮಿಥುನ್ ಮನ್ಹಾಸ್ ಬಿಸಿಸಿಐ ನ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆ ಇದೆ.




