ನವದೆಹಲಿ: ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ( ಬಿಸಿಸಿಐ) ನ 37 ನೇ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಬಿಸಿಸಿಐನ 94 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಿಥುನ್ ಮನ್ಹಾಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ದೇವಜೀತ್ ಸೈಕಿಯಾ ಆಯ್ಕೆಯಾದರು. ಇನ್ನುಳಿದ ಬಿಸಿಸಿಐನ ಮಂಡಳಿಯ ಪದಾಧಿಕಾರಿಗಳು ಪದಗ್ರಹಣ ಮಾಡಿದರು.




