Ad imageAd image

ಕಿತ್ತೂರು ಉತ್ಸವದ ಬಿತ್ತಿ ಚಿತ್ರ ಬಿಡುಗಡೆ ಮಾಡಿದ ಶಾಸಕ ಬಾಬಾ ಸಾಹೇಬ ಪಾಟೀಲ

Bharath Vaibhav
ಕಿತ್ತೂರು ಉತ್ಸವದ ಬಿತ್ತಿ ಚಿತ್ರ ಬಿಡುಗಡೆ ಮಾಡಿದ ಶಾಸಕ ಬಾಬಾ ಸಾಹೇಬ ಪಾಟೀಲ
WhatsApp Group Join Now
Telegram Group Join Now

ಬೆಳಗಾವಿ  ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೋಟೆ ಆವರಣದಲ್ಲಿ ‘ರಾಣಿ ಚನ್ನಮ್ಮ ಮುಖ್ಯ ವೇದಿಕೆ’ ನಿರ್ಮಿಸಲಾಗಿದೆ. ವೇದಿಕೆ ಮುಂಭಾಗದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ‘ಸರದಾರ ಗುರುಸಿದ್ದಪ್ಪ ವೇದಿಕೆ’ ನಿರ್ಮಿಸಲಾಗಿದೆ. 3 ದಿನ ವೈವಿಧ್ಯಮಯ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ’ .

‘ಫಲ-ಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ಆರೋಗ್ಯ ಮೇಳ, ಕ್ರೀಡೆ ಮತ್ತು ದೋಣಿ ವಿಹಾರ ಆಯೋಜಿಸಲಾಗಿದೆ. ಜಲಸಾಹಸ ಕ್ರೀಡೆ, ಕಬಡ್ಡಿ, ವಾಲಿಬಾಲ್‌, ಹಗ್ಗಜಗ್ಗಾಟ, ಕುಸ್ತಿ ಪಂದ್ಯಾವಳಿ ನಡೆಯಲಿವೆ. ಬೈಕ್ ರ್‍ಯಾಲಿ, ಮ್ಯಾರಥಾನ್‌ ಸೇರಿ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಉತ್ಸವ ವೀಕ್ಷಣೆಗೆ ಆಗಮಿಸುವವರಿಗೆ ಬಸ್‌ ವ್ಯವಸ್ಥೆ ಕೂಡ ಮಾಡಲಾಗಿದೆ’  ಕಿತ್ತೂರು ಕೋಟೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕೈಗೊಂಡ ಕಾಮಗಾರಿಗಳನ್ನು ಸತತ ಮಳೆ ಹಿನ್ನೆಲೆಯಲ್ಲಿ ಪೂರ್ಣಗೊಳಿಸಲು ಆಗಿರಲಿಲ್ಲ. ಉತ್ಸವದ ಮುನ್ನಾದಿನ ರಾತ್ರಿಯವರೆಗೂ ಎಲ್ಲ ಕಾಮಗಾರಿ ಮುಗಿಸಿ, ಜನರಿಗೆ ಅನುಕೂಲ ಕಲ್ಪಿಸುತ್ತೇವೆ’

ಅಗತ್ಯ ಮೂಲಸೌಕರ್ಯ: ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿ, ‘ಈ ಸಲ ಕಿತ್ತೂರು ಉತ್ಸವ ವೈಭವದಿಂದ ನೆರವೇರಲಿದೆ. ಪ್ರತಿದಿನ 1 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. ವಸತಿಗಾಗಿ ಹೋಟೆಲ್‌ಗಳು, ಲಾಡ್ಜ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕೆಲವು ಹಾಸ್ಟೆಲ್‌ಗಳನ್ನೂ ಬಳಸಿಕೊಳ್ಳುತ್ತಿದ್ದೇವೆ’  ಕಿತ್ತೂರು ಉತ್ಸವದ ದ್ವಿಶತಮಾನೋತ್ಸವ ಹೆಚ್ಚು ಸ್ಮರಣೀಯಗೊಳಿಸಲು ‘ಏರ್ ಷೋ’ ನಡೆಸಲು ಯೋಜಿಸಿದ್ದೇವೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವರೊಂದಿಗೆ ಪತ್ರ ವ್ಯವಹಾರ ಮಾಡಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರೂ, ಸಚಿವರಿಗೆ ಭೇಟಿಯಾಗಿ ಮಾತನಾಡಿದ್ದಾರೆ’ ಎಂದರು.

‘ಉತ್ಸವದ ಅಂಗವಾಗಿ ಅ.22ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲೂ ರಸಮಂಜರಿ, ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!