ರಾಯಚೂರು :ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರವರ ಕೋರಿಕೆಯಂತೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮವಹಿಸಿ ರಾಯಚೂರು ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಸಚಿವರು ಇದೆ ವೇಳೆ ತಿಳಿಸಿದರು.
ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆ ಮಂಜೂರಾತಿಗೆ ಶಾಸಕರ ಒತ್ತಾಯ: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಅಂದಾಜು 400 ಕಾರ್ಖಾನೆಗಳಿವೆ. ಇಲ್ಲಿ ಕೆಲಸ ಮಾಡುವ ಸಾವಿರಾರು ಸಂಖ್ಯೆಯ ಕಾರ್ಮಿಕರಿಗೆ ಇಎಸ್ಐ ಸೌಕರ್ಯ ಸಿಗುವ ನಿಟ್ಟಿನಲ್ಲಿ ರಾಯಚೂರ ಜಿಲ್ಲೆಗೆ ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆಯನ್ನು ಮಂಜೂರಿ ಮಾಡಲು ಮಾನ್ಯ ಕಾರ್ಮಿಕ ಸಚಿವರು ಆದೇಶ ಮಾಡಬೇಕು ಎಂದು ಮನವಿ ಮಾಡಿದರು.
ಸಮಾರಂಭದಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ , ಜಿ.ಪಂ ಸಿಇಒ ಈಶ್ವರ ಕುಮಾರ ಕಾಂದೂ, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ, ಮಹಾನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ಮಾಡಗಿರಿ,ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಶೀರ್, ಜಿಲ್ಲಾಧಿಕಾರಿ ನಿತಿಶ್ ಕೆ, ಎಸ್ ಪಿ ಪುಟ್ಟಮಾದಯ್ಯ ಮತ್ತಿತರರು ಉಪಸ್ಥಿತರಿದ್ದರು.
ವರದಿ:ಗಾರಲದಿನ್ನಿ ವೀರನಗೌಡ




