Ad imageAd image

ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಬೆಂಬಲ ಹುಡುಕಿಕೊಳ್ಳಿ : ಶಾಸಕ ಸಿ. ಟಿ ರವಿ

Bharath Vaibhav
ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಬೆಂಬಲ ಹುಡುಕಿಕೊಳ್ಳಿ : ಶಾಸಕ ಸಿ. ಟಿ ರವಿ
WhatsApp Group Join Now
Telegram Group Join Now

ವಿಜಯಪುರ: ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಬೆಂಬಲ ಹುಡುಕಿಕೊಳ್ಳುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಕಾಂಗ್ರೆಸ್ ಗೆ ಭಾರತದಲ್ಲಿ ಹಿಂದು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಬೆಂಬಲವಿಲ್ಲ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ ಚುನಾವಣಾ ಪ್ರಚಾರ ಮಾಡಿದ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ ಎಂದು ಹೇಳಿದರು.

ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಹೋಗಿದ್ದಾರೆ. ಅಲ್ಲಿ ಶೇ.52ರಷ್ಟು ಮುಸ್ಲಿಂ ಜನಸಂಖ್ಯೆ ಇರುವುದರಿಂದ ರಾಹುಲ್ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಹೆಸರನ್ನು ಬಳಸುವುದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗೆ ಬರುತ್ತಿರುವ ಮತಗಳನ್ನೂ ಕಳೆದುಕೊಳ್ಳುತ್ತದೆ ಎಂದರು.

ಕಾಂಗ್ರೆಸ್ ಗೆ ದೂರದೃಷ್ಟಿ ಇಲ್ಲ. ಆ ಪಕ್ಷದಲ್ಲಿ ಬಿಜೆಪಿಯಂತೆ ಸೂಕ್ತ ಪ್ರಧಾನಿ ಅಭ್ಯರ್ಥಿಯೂ ಇಲ್ಲ. ಅವರ ಇಂಡಿಯಾ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಜನ ಕೇಳುತ್ತಿದ್ದಾರೆ ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!