ಅರಸೀಕೆರೆ: ನಗರದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಸನ ,ತಾಲೂಕು ಪಂಚಾಯಿತಿ ಅರಸೀಕೆರೆ ,ತಾಲೂಕು ಆಡಳಿತ ಅರಸೀಕೆರೆ, ಶಾಲಾ ಶಿಕ್ಷಣ ಇಲಾಖೆ ಅರಸೀಕೆರೆ, ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ(ಟ್ರಸ್ಟ್)ರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಮಹಾತ್ಮ ಗಾಂಧೀಯವರು ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ನೆರೆದಿದ್ದ ವಿದ್ಯಾರ್ಥಿಗಳನ್ನು ಕುರಿತು ಮಹನೀಯರ ಜೀವನ ಮೌಲ್ಯಗಳು ಭಾರತ ಸ್ವಾತಂತ್ರಕ್ಕೋಸ್ಕರ ಅವರ ಶ್ರಮಗಳನ್ನು ವಿವರವಾಗಿ ತಿಳಿಸಿದರು.
*ಈ ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ಅರಸೀಕೆರೆ ನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿ, ಅರಸೀಕೆರೆ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್, ಗೀಜಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಿವಕುಮಾರ್,ಅನಂತ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಯ ಛೇರ್ಮನ್ ಅನಂತ ಕುಮಾರ್, ಶಿಶು ಅಭಿವೃದ್ಧಿ ಅಧಿಕಾರಿ ಯೋಗೀಶ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು,ಇನ್ನಿತರ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ರಾಜು ಅರಸಿಕೆರೆ




