ಸಿರುಗುಪ್ಪ : –ನಗರದ ತಹಶೀಲ್ದಾರ್ ಕಛೇರಿಯ ಮುಂಭಾದಲ್ಲಿರುವ 7,8ನೇ ವಿಭಾಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆಗಳ ವತಿಯಿಂದ ಅಕ್ಷರ ಅವಿಷ್ಕಾರ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 2024-25ನೇ ಸಾಲಿನಲ್ಲಿನ ಆರಂಭಗೊಳ್ಳುತ್ತಿರುವ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ಪೂರ್ವ ಪ್ರಾಥಮಿಕ ತರಗತಿಗಳ ಕೊಠಡಿಯನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ ರಾಜ್ಯದಲ್ಲಿ ಸಾಕ್ಷರತೆಯ ಪ್ರಮಾಣದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕದ ಭಾಗದ ಶಾಲೆಯ ಮಕ್ಕಳಿಗೆ ಪೂರ್ವ ಪ್ರಾಥಮಿಕವಾಗಿ ಎಲ್.ಕೆ.ಜಿ ಮತು ಯು.ಕೆ.ಜಿ ತರಗತಿಗಳಲ್ಲಿ ಇಂಗ್ಲೀಷ್ ಭಾಷೆ ಕಲಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಮಹತ್ತರ ಯೋಜನೆಯನ್ನು ಜಾರಿಗೆ ತಂದಿದೆ.ತಾಲೂಕಿನಲ್ಲಿ ಅಕ್ಷರ ಅವಿಷ್ಕಾರ ಯೋಜನೆಯಡಿ 32 ಶಾಲೆಗಳಲ್ಲಿ ಕಟ್ಟಡ, ಸಿಬ್ಬಂದಿಗಳು ಮತ್ತು ಆಯಾಗಳ ವ್ಯವಸ್ಥೆಯೊಂದಿಗೆ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲೂ ಹೆಚ್ಚಿನ ಅಭಿವೃದ್ದಿಗೆ ಹೊತ್ತು ಕೊಡಲಾಗುವುದು ಎಂದು ತಿಳಿಸಿದರು.
ಶಾಲೆಗೆ ಅಗತ್ಯವಿರುವ ನೀರು, ಸ್ವಚ್ಛತೆ, ಮತ್ತು ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಸಂಬಂದಿಸಿದ ಜನಪ್ರತಿನಿಧಿಗಳಿಗೆ ಸೂಚಿಸಿದರು.
ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ತಾಲೂಕು ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ರಮೇಶ, ಕರ್ನಾಟಕ ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಈರಣ್ಣ, ನಿವೃತ್ತ ಶಿಕ್ಷಣ ಸಂಯೋಜಕ ಬಸವರಾಜಯ್ಯ, ಪ್ರಸ್ತುತ ಇ.ಸಿ.ಓಗಳಾದ ರಫೀಕ್, ಹನುಮನಗೌಡ, ಬಿ.ಆರ್.ಪಿಗಳಾದ ಕಾಳಿಂಗಪ್ಪ, ವೀರೇಶ, ಗಜೇಂದ್ರ, ರುದ್ರವೇಣ , ಸಿ.ಆರ್.ಪಿ. ಮಂಜುನಾಥ ಅಂಗಡಿ, ಶಾಲಾ ಅಭಿವೃದ್ದಿ ಮಂಡಳಿ ಅಧ್ಯಕ್ಷ ಲಕ್ಷ್ಮಣ, ಮುಖ್ಯಗುರು ಸದಾಶಿವ.ಎನ್.ಬನ್ಸೋಡೆ, ಬಗರ್ ಹುಕ್ಕುಂ ಸದಸ್ಯ ಪವನ್ ದೇಸಾಯಿ, ಮುಖಂಡರಾದ ಮೋಹಿನುದ್ದೀನ್ ಖಾದ್ರಿ, ವೆಂಕಟೇಶ, ಗೊರವರ ಶ್ರೀನಿವಾಸ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ವರದಿ :-ಶ್ರೀನಿವಾಸ ನಾಯ್ಕ