ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ.ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಲೋಕಸಭೆಗೂ ಘೋಷಣೆಯಾದ ನಂತರ ಶಿವಮೊಗ್ಗ, ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ಮೋದಿ ಪ್ರಚಾರ ಸಭೆ, ರೋಡ್ ಶೋ ನಡೆಸಿದ್ದರು.
ಈಗ ಬೆಳಗಾವಿ, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು.
ಬೆಳಗಾವಿಗೆ ನಿನ್ನೆ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿರುವ ಮೋದಿ 11 ಗಂಟೆಗೆ ಬೆಳಗಾವಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಶಿರಸಿಗೆ ತೆರಳಲಿದ್ದು, ಅಲ್ಲಿಂದ ದಾವಣಗೆರೆ, ಬಳಿಕ ಹೊಸಪೇಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.