Ad imageAd image
- Advertisement -  - Advertisement -  - Advertisement - 

ದೇಶಕ್ಕೆ ಮೋದಿಯೇ ಗ್ಯಾರಂಟಿ – ಶೆಟ್ಟಿಹಳ್ಳಿ ಅಧ್ಯಕ್ಷ ಬಿ. ಸುರೇಶ್”

Bharath Vaibhav
ದೇಶಕ್ಕೆ ಮೋದಿಯೇ ಗ್ಯಾರಂಟಿ – ಶೆಟ್ಟಿಹಳ್ಳಿ ಅಧ್ಯಕ್ಷ ಬಿ. ಸುರೇಶ್”
WhatsApp Group Join Now
Telegram Group Join Now

ಬೆಂಗಳೂರು: -ಪೀಣ್ಯ,ದಾಸರಹಳ್ಳಿ: ದೇಶದ ಭದ್ರತೆಯ ವಿಷಯ ಬಂದಾಗ ಜನರ ಮನಸಲ್ಲಿ ಬರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಜನರ ತೆರಿಗೆ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯ ಮಾಡಿ ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬದಲಾಗಿ ಮತದಾರರು

ನರೇಂದ್ರ ಮೋದಿಯವರೇ ದೇಶದ ಗ್ಯಾರಂಟಿ ಎಂದು ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುತ್ತಾರೆ

 

ಎಂದು ಶೆಟ್ಟಿಹಳ್ಳಿ ವಾರ್ಡಿನ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ ಹೇಳಿದರು.
ಶೆಟ್ಟಿಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆಗಳ ಸಮೀಪ ಮತದಾರರಿಗೆ ಮತದಾನ ಮಾಡಲು ವ್ಯವಸ್ಥೆ ಮಾಡಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಶೋಭ ಕರಂದ್ಲಾಜೆ ಪರ ಮತ ನೀಡುವಂತೆ ಮತದಾರರಿಗೆ ಮನವಿ ಮಾಡುತ್ತಾ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ನಮ್ಮ ಶಾಸಕರಾದ ಎಸ್ ಮುನಿರಾಜುರವರ ನೇತೃತ್ವದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನಮ್ಮ ಎನ್ ಡಿ ಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇವರಿಗೆ ದಾಸರಹಳ್ಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಲೀಡ್ ಕೊಡುವ ಮೂಲಕ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ’, ಎಂದು ಘಂಟಾಘೋಷವಾಗಿ ಹೇಳಿದರು.

ಇದೇ ವೇಳೆ ಬೂತ್ ನ ಸಿಬ್ಬಂದಿಗಳು ಮತದಾನವನ್ನು ನಿಧಾನಗತಿಯಲ್ಲಿ ಮಾಡುತ್ತಿರುವುದು ಕಂಡುಬಂದು ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವು ನಡೆಯಿತು.

ಈ ಸಂದರ್ಭದಲ್ಲಿ ಡಾ .ಬಿ ಆರ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ನರಸಿಂಹಮೂರ್ತಿ, ಶೆಟ್ಟಿಹಳ್ಳಿ ವಾರ್ಡ್ ನ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ವರದಿ:-ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!