ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಬಲಿಯಾದವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ.
ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡಿದ ಅಮಿತ್ ಶಾ ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಆಯಾ ರಾಜ್ಯಗಳಿಗೆ ಮೃತದೇಹವನ್ನು ರವಾನೆ ಮಾಡಲಾಗುತ್ತದೆ.
ಎರಡು ದಿನಗಳ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಿಗ್ಗೆ ನವದೆಹಲಿಗೆ ಮರಳಿದ್ದು, ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರೊಂದಿಗೆ ತುರ್ತು ಸಭೆ ನಡೆಸಿದರು.ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸಿಸಿಎಸ್ ಸಭೆ ನಡೆಸಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಸಂಬಂಧಿತ ಭಯೋತ್ಪಾದಕರು ಗುಂಡು ಹಾರಿಸಿದ್ದು, ವಿದೇಶಿ ಪ್ರವಾಸಿಗರು ಸೇರಿದಂತೆ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಲಷ್ಕರ್ ಅಂಗಸಂಸ್ಥೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ಉನ್ನತ ಗುಪ್ತಚರ ಮೂಲಗಳು ತಿಳಿಸಿವೆ.