Ad imageAd image

ಪ್ರಧಾನಿ ಹುದ್ದೆಗೆ ಕೂಡಲೇ ಮೋದಿ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ

Bharath Vaibhav
ಪ್ರಧಾನಿ ಹುದ್ದೆಗೆ ಕೂಡಲೇ ಮೋದಿ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲಾ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ.

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರೂವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!