ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡಿನಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹೇಳಲಾಗಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ, ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.




