ಸಂಡೂರು : ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಕರ್ನಾಟಕದ ಸಂಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್ (25) ಎಂದು ಗುರುತಿಸಲಾಗಿದೆ.
ದೆಹಲಿಯ ಕಾಲೇಜುವೊಂದರಲ್ಲಿ ಕಂಪ್ಯೂಟರ್ ಸಾಫ್ಟ್‌ಸ್ಟಿಲ್ಸ್ ನಲ್ಲಿ ಡಿಪ್ಲೋಮಾ ತರಬೇತಿ ಪಡೆದಿದ್ದ ಆರೋಪಿಯು ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ..
ಯುವತಿಯರ ಹೆಸರಿನಲ್ಲಿ ಖಾತೆ ರಚಿಸಿ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮುಂಬೈನ ಪೊಲೀಸ್ ಠಾಣೆಯೊಂದರಲ್ಲಿ ದೂರು ನೀಡಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಗೂಗಲ್ ನ ತಾಂತ್ರಿಕ ಮಾಹಿತಿಯನ್ನು ಕಲೆಹಾಕಿ ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಆರೋಪಿಯ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದು, ಅದನ್ನು ಪರಿಶೀಲಿಸಿದಾಗ ಮಹಿಳೆಯರ ಹೆಸರಿನಲ್ಲಿ 11 ನಕಲಿ ಖಾತೆಗಳನ್ನು ಹಾಗೂ 100ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿರುವುದು ಪತ್ತೆಯಾಗಿದೆ.
ಅಲ್ಲದೆ ಆರೋಪಿಯ ಫೋನ್ ನಲ್ಲಿ ಸುಮಾರು 13,500ಕ್ಕೂ ಹೆಚ್ಚು ಮಹಿಳೆಯರ ಫೋಟೋಗಳು ಪತ್ತೆಯಾಗಿದ್ದು, ಮಹಿಳೆಯರಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡುವಂತೆ ಹೇಳುತ್ತಿದ್ದೆ ಒಂದು ವೇಳೆ ಅವರು ಅದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಮಾನಹಾನಿ ಮಾಡುತ್ತಿದ್ದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.




