Ad imageAd image

ಏಪ್ರಿಲ್ 1ರಂದು ಬೃಹತ್ ಉದ್ಯೋಗ ಮೇಳ : 250 ಕ್ಕೂ ಹೆಚ್ಚು ಕಂಪನಿಗಳು ಭಾಗಿ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ ಮೊದಲನೇ ವಾರದಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!