ಸಿಂಧನೂರು : ಅ.05 ನಗರದಲ್ಲಿ ಕಳೆದ ಎಂಟು ದಿನಗಳ ಹಿಂದೆ ಉದ್ಘಾಟನೆಗೊಂಡ ತಾಯಿ ಮಕ್ಕಳ ಆಸ್ಪತ್ರೆ ಅತ್ಯಂತ ಕಳಪೆ ಮಟ್ಟದಿಂದ ನಿರ್ಮಾಣ ಮಾಡಲಾಗಿದೆ ಎಂದು ಸಮಾಜಿಕ ಹೋರಾಟಗಾರ ಹನುಮಂತ ಕಲ್ ಶೆಟ್ಟಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿ ಅವರು, ಸುಮಾರು15 ಕೋಟಿ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.
ಆದರೆ ಗುತ್ತಿಗೆದಾರರು ಕಾಮಗಾರಿ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ನಿರ್ಮಿಸಿದ ಸರಿಯಾಗಿ ಕ್ಯೂರಿಂಗ್ ಮಾಡದ ಹಿನ್ನೆಲೆ ಈಗಾಗಲೇ ಕಟ್ಟಡದಲ್ಲಿ ಬಿರುಕು ಬಿಟ್ಟು. ಮಳೆಯಿಂದ ಸೋರುತಿದೆ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಶಾಸಕ ಹಂಪನಗೌಡ ಬಾದರ್ಲಿ ರವರೆಗೆ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕಲ್ ಶೆಟ್ಟಿ ಅವರು ಮನವಿ ಸಲ್ಲಿಸಿ
ಈ ಕೂಡಲೇ ಗುತ್ತೇದಾರರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ವರದಿ : ಬಸವರಾಜ ಬುಕ್ಕನಹಟ್ಟಿ




